ಬೆಂಗಳೂರು:- ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅಧಿಕಾರ ಅವಧಿ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಈ ಸ್ಥಾನಕ್ಕೆ ಬೆಳಗಾವಿಯ ಪ್ರಮುಖ ನಾಯಕ ಹಾಗೂ ರಾಜ್ಯದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ನೀಡಲು ಚಿಂತನೆ ನಡೆಸಿದೆ ಜೊತೆಗೆ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸತೀಶ್ ಅವರಿಗೆ ಪಟ್ಟ ಕಟ್ಟಲು ಗ್ರೀನ್ ಸಿಗ್ನಲ್ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ ಈ ಹಿಂದೆ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ರಾಜ್ಯದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಹೆಸರು ಜೋರಾಗಿ ಸದ್ದು ಮಾಡಿತ್ತು ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ
Subscribe to Updates
Get the latest creative news from FooBar about art, design and business.