ವಿಟ್ಲ:- ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಅಪ್ರಾಪ್ತ ಪ್ರಾಯದ ಬಾಲಕ ಆತನ ಶಾಲಾ ಸಹಪಾಠಿವೊಬ್ಬಳೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಅಪ್ರಾಪ್ತ ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದರು ಈ ಸಂದರ್ಭದಲ್ಲಿ ಪದ್ಮರಾಜ್ ಎಂಬಾತ ಹಿಂದೂ ಹುಡುಗಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ತಕರಾರು ತೆಗೆದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 83/205 ಕಲಂ 126( 2) 352 351(3) 196(1)a BSN 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಆತನ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ



