ಉಡುಪಿ ಜಿಲ್ಲಾ ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ರವರು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರು ಮಂಜುನಾಥ ಭಂಡಾರಿ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ರಾಜ್ಯದ್ಯಕ್ಷರಾದ ಸೌಮ್ಯ ರೆಡ್ಡಿ , ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷರಾದ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ,ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಹೆಬ್ಬಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ , ಉಡುಪಿ ವಿಧಾನಸಭಾ ನಾಯಕರಾದ ಪ್ರಸಾದರಾಜ್ ಕಾಂಚನ್, ರಾಜು ಪೂಜಾರಿ, ಶ್ರೀಮತಿ ಗೀತಾ ವಾಗ್ಲೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು ಲೇ, ಹರೀಶ್ ಕಿಣಿ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.



