ಬೆಳ್ತಂಗಡಿ:- ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತ ದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೋಲಿಸರ ಮುಂದೆ ಹೇಳಿಕೆ ನೀಡಿದ ಧರ್ಮಸ್ಥಳದಲ್ಲಿ ಸ್ವಚ್ಚತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ
ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ



