
ಬೆಂಗಳೂರು:- ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಾಲಾಗಿರುವ ಸೆಕ್ಷನ್ ಗಳ ಅಡಿಯಲ್ಲಿ ಅಪರಾಧವನ್ನು ಪುನಾರವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಹೈಕೋರ್ಟ್ ಎಚ್ಚರಿಕೆ ಮಾಡಿದೆ



ಹರೀಶ್ ಪೂಂಜಾ ಸಲ್ಲಿಸಿದ ಅರ್ಜಿ ಇಂದು ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿತ್ತು ಕೋಮು ಗಲಭೆಯನ್ನು ಪ್ರಚೋದಿಸಿ ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಾಲಾಗಿರುವ ಎಫ್ ಐ ಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ರದ್ದುಗೊಳಿಸುವಂತೆ ದುರುದಾರ ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು