ಪುತ್ತೂರು:- ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷದ ಯುವ ನಾಯಕ ಎಸ್ ಅಬ್ದುಲ್ ಸಲಾಂ ಸಂಪ್ಯ ಅವರು ನೇಮಕಗೊಂಡಿದ್ದಾರೆ
ಸಲಾಂ ಸಂಪ್ಯ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಆದೇಶ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವ ಇವರ ಶಿಪರಾಸ್ಸು ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಆಜಾದ್ ಇವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ಸಲಾಂ ಸಂಪ್ಯ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿ ಸಂಪ್ಯ ಬೂತ್ ಅಧ್ಯಕ್ಷರಾಗಿ ಹಲವು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರಿಯರಾಗಿರುತ್ತಾರೆ ಇವರ ಅರ್ಹತೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಮಹತ್ವದ ಜವಾಬ್ದಾರಿಯನ್ನು ನೀಡಿದೆ



