ಬಂಟ್ವಾಳ:- NSUI ಬಂಟ್ವಾಳ ವಿಧಾನ ಸಭಾ ಸಮಿತಿಯ ವತಿಯಿಂದ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಲಿದೆ ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಸಫ್ವಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
2024- 2025 ನೇ ಸಾಲಿನ 10 ನೇ ಮತ್ತು 12 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಕಾರ್ಯಕ್ರಮ ನಡೆಯಲಿದೆ ಎಂದರು
ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದವರಾಗಿರಬೇಕು
ಮತ್ತು ಶೇಕಡಾ 85% ಹೆಚ್ಚು ಅಂಕಗಳನ್ನು ಪಡೆದಿರಬೇಕು
ದಿನಾಂಕ 20/07/2025 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ
ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ- 9591849814



