ತಲಕ್ಕಿ:-
ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಸಹಭಾಗಿತ್ವದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ತಲಕಿ ಜಂಕ್ಷನ್ ನಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ನಡೆಯಿತು.
ಈ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ ರಮನಾಥ್ ರೈ ಅವರು ಮಾತನಾಡಿ ಬಿಜೆಪಿ ಎಂಬುದು ಸುಳ್ಳಿನ ಪಕ್ಷವಾಗಿ ಜಾತಿ ಧರ್ಮಗಳ ನಡುವೆ ಕಂದಕ ಉಂಟು ಮಾಡಿ ರಾಜಕೀಯ ಲಾಭ ಪಡೆಯುವುದು ಅಪಪ್ರಚಾರ ಮಾಡುವುದೇ ಬಿಜೆಪಿಯ ಜಾಯಮಾನವಾಗಿದೆ ಎಂದು ನುಡಿದರು
ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತ್ರತ್ವದಲ್ಲಿ ಐದು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಮತ್ತು ರಾಜ್ಯದ ಉದ್ದಗಲಕ್ಕೂ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನಪರ ಸರಕಾರವಾಗಿ ಕಾಂಗ್ರೆಸ್ ಪಕ್ಷ ಗುರುತಿಸಿದೆ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದೇ ಬಿಜೆಪಿಗರು ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿರುವುದು ಹಾಸ್ಯಸ್ಪದ ಎಂದು ಲೇವಡಿ ಮಾಡಿದರು

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಕ್ಷದ ಪ್ರಮುಖರಾದ ಎ.ಬಿ.ಅಬ್ದುಲ್ಲಾ, ಬಿ.ಎಮ್ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಐಡಾ ಸುರೇಶ್, ಎನ್.ಎಸ್ ಯು.ಐ ಬಂಟ್ವಾಳ ಸಮಿತಿಯ ಅಧ್ಯಕ್ಷರಾದ ಮುಹಮ್ಮದ್ ಸಫ್ವಾನ್, ಮಹಮ್ಮದ್ ಮಂಚಿ, ದಾವೂದ್, ಪಿಟಿ ಇಬ್ರಾಹಿಂ, ಇಬ್ರಾಹಿಂ ತಲಕ್ಕಿ, ನಾಸೀರ್ ತಲಕ್ಕಿ, ಶರೀಫ್ ತಲಕ್ಕಿ, ಹಸೈನಾರ್ ಮೊದಲಾದವರು ಉಪಸ್ಥಿತರಿದ್ದರು



