
ತಿರುವನಂತಪುರಂ :- ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್ ಅಚ್ಯುತಾನಂದನ್ ಅವರು ಇಂದು ಸೋಮವಾರ ನಿಧನರಾದರು



ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ತೀವ್ರ ನಿಗಾ ಘಟಕದಲ್ಲಿ ಇದ್ದವರು ಎಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ
ಶತಾಯುಷಿಯಾದ ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ವಿಶಿಷ್ಟ ಚಾಪು ಮೂಡಿಸಿರುವ ವ್ಯಕ್ತಿಯಾಗಿದ್ದಾರೆ
ಏಳು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಚ್ಯುತಾನಂದನ್ ಅವರು 2006 ರಿಂದ 2011ರವರೆಗೆ ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು
ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದರು
ಅಚ್ಯುತಾನಂದನ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು