
ಬಂಟ್ವಾಳ:-


ದಿನಾಂಕ 23/07/2025 ರಂದು ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಪಂಚಾಯತಿನ 2ನೇ ಮಹಡಿಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಪಂಚ ಗ್ಯಾರಂಟಿ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಹಿಂದಿನ ಸಭೆಯಲ್ಲಿ ಫ್ಲೈಓವರ್ ನಿರ್ಮಾಣದ ಬಳಿಕ ಉಪ್ಪಿನಂಗಡಿಯಿಂದ ಬರುವ ಬಸ್ಸುಗಳು ಮಾಣಿ ಜಂಕ್ಷನ್ಗೆ ಬರುವ ಬಗ್ಗೆ ನಿರ್ಣಯವನ್ನು ಕೈಗೊಂಡಿದ್ದು,
ಸದ್ರಿ ನಿರ್ಣಯಕ್ಕೆ ಸ್ಪಂದಿಸಿದ ಇಲಾಖೆಯು ಈ ಹಿಂದಿನಂತೆ ಮಾಣಿ ಬಸ್ಸು ತಂಗುದಾಣದಲ್ಲಿ ಬಸ್ಸು ನಿಲುಗಡೆಗೊಳಿಸುತ್ತಿದೆ ಎಂದು ಸಂಬಂಧಿಸಿದ ಇಲಾಖಾಧಿಕಾರಿಯವರು ಸಭೆಗೆ ತಿಳಿಸಿದರು.
ದಿನಾಂಕ: 25/07/2025 ರಂದು ಪೂರ್ವಾಹ್ನ 11.00 ಗಂಟೆಗೆ ಮೂಡುಪಡುಕೋಡಿ ಗ್ರಾಮದ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಕೊಳಲ ಬಾಕಿಮಾರು ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಮತ್ತು ಅದೇ ದಿನ ಅಪರಾಹ್ನ 1.30 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಇಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಾಗೂ ದಿನಾಂಕ: 02-08-2025 ರಂದು ಪಂಚ ಗಾರಂಟಿ ಯೋಜನಾ ಸಮಿತಿಯಿಂದ “ಆಟಿದ ಗಮ್ಮತ್ತು” 2025-26 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ: 14/07/2025 ರಂದು ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಬಂಟ್ವಾಳದಲ್ಲಿ “ಶಕ್ತಿ ಸಂಭ್ರಮ” ಕಾರ್ಯಕ್ರಮವನ್ನು ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಆಯೋಜನೆ ಮಾಡಿದ ಡಿಪೋ ಅಧಿಕಾರಿಯವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾರ್ಯದರ್ಶಿಗಳಾದ ಸಚಿನ್ ಕುಮಾರ್, ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.