
ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು,


ತಾಲೂಕು ಪಂಚಾಯತ್ ಬಂಟ್ವಾಳ ವತಿಯಿಂದ ಇರ್ವತ್ತೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಪಂಚ ಗ್ಯಾರಂಟಿ ಸದಸ್ಯರಾದ ಸುದೀರ್ ಶೆಟ್ಟಿ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕೊಳಲಬಾಕಿಮಾರು ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

*ಪರಿಸರಕ್ಷಣೆಯಲ್ಲಿ ಸ್ಥಳೀಯ ಸಂಸ್ಥೆಗಳು ಮುಖ್ಯ ಪಾತ್ರ ವಹಿಸಬೇಕು : ಜಯಂತಿ ವಿ.ಪೂಜಾರಿ*
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಮಾತನಾಡಿ ಪರಿಸರ ರಕ್ಷಣೆ ನಮ್ಮೆಲ್ಲರ ಹೋಣೆ,ಪ್ರತಿ ಮನೆಯಲ್ಲಿ ವನಮಹೋತ್ಸವ ನಡೆಯಬೇಕು,ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಸಂಘ ಸಂಸ್ಥೆಗಳು ತಮ್ಮ ಸುತ್ತ ಮುತ್ತಲಿನ ಪರಿಸರಲ್ಲಿ ಗಿಡ ನೆಟ್ಟು ಪರಿಸರದ ರಕ್ಷಣೆ ಮಾಡಬೇಕು,ಪಂಚ ಗ್ಯಾರಂಟಿ ವತಿಯಿಂದ ಇನ್ನಷ್ಟು ಕಾರ್ಯಕ್ರಮಗಳನ್ನು ಅಯೋಜನೆ ಮಾಡಲಾಗುವುದು ಎಂದರು.
*ಪರಿಸರ ರಕ್ಷಣೆ ನಮ್ಮ ಹೊಣೆ ಸಚಿನ್ ಕುಮಾರ್*
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ಪರಿಸರ ರಕ್ಷಣೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಈ ಕರ್ತವ್ಯವನ್ನು ನಾವು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಹರ್ಸನ್,ಚಂದ್ರಶೇಖರ್ ಆಚಾರ್ಯ,ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಾಲತಿ,ಸದಸ್ಯರಾದ ಶ್ರೀದಯಾನಂದ ನಾಯ್ಕ್,ಶ್ರೀಮತಿ ವಿಜಯ, ಪ್ರಶಾಂತ ಜೈನ್, ಚೆನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ B.R, ಕೊಳಲಬಾಕಿಮಾರು ಶಾಲೆಯ SDMC ಅಧ್ಯಕ್ಷರಾದ ಶ್ರೀಮತಿ ವಿಮಲಾ, SDMC ಸರ್ವಸದಸ್ಯರು, ಪ್ರಮುಖರಾದ ಕೊರಗಪ್ಪ ಶೆಟ್ಟಿ, ಬಾಲಕೃಷ್ಣ ಅಂಚನ್,ಮಂಜುನಾಥ ಪೂಜಾರಿ ಮತ್ತು ಶಾಲಾ ಪೊಷಕರು,ಊರಿನ ವಿಧ್ಯಾಭಿಮಾನಿಗಳು,ಸ್ಥಳೀಯ ಅಂಗನವಾಡಿ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥರಿದ್ದರು.
ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ವನಮಹೋತ್ಸವ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕರಾದ ರಾಜೇಶ ಕೆ, ಸ್ವಾಗತಿಸಿದರು, ಅತಿಥಿ ಶಿಕ್ಷಕಿಯಾದ ಶ್ರೀಮತಿ ನಿಕಿತಾ ರವರು ದನ್ಯವಾದ ಸಲ್ಲಿಸಿದರು.