ಮೂಡಿಗೆರೆ ( ಚಿಕ್ಕಮಗಳೂರು) ಹಿಂದೂವಾಗಿ, ದಲಿತೆಯಾಗಿ, ಮೂಡಿಗೆರೆಯಲ್ಲಿ ಜನಿಸಿದ್ದೇನೆ ಮುಂದೆ ಬಿಜೆಪಿಗೆ ಹೋಗ್ತಿನೊ ಕಾಂಗ್ರೆಸ್ ಪಕ್ಷದಲ್ಲಿ ಉಳಿತಿನೋ ಬಿ.ಎಸ್ ಪಿ ಅಥವಾ ಎಸ್ ಡಿ ಪಿ ಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ
ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಜಾತ್ಯಾತೀತ ಪಕ್ಷವಾದ
ಕಾಂಗ್ರೆಸ್ ಪಕ್ಷದ ಸಿದ್ದಾಂತದಲ್ಲಿ ಗೆದ್ದು ಶಾಸಕಿಯಾಗಿ ಕಾಂಗ್ರೆಸ್ ಪಕ್ಷದ ಜಾತ್ಯತೀತ ಸಿದ್ದಾಂತಗಳಿಗೆ ಅಗೌರವ ತೋರಿದ ಶಾಸಕಿ ನಯನಾ ಮೋಟಮ್ಮ ಅವರ ಹೇಳಿಕೆ ಹಾಗೂ ಪ್ರಮೋದ್ ಮುತಾಲಿಕ್ ಅವರ ಜೊತೆಗೆ ವೇದಿಕೆ ಹಂಚಿರುವ ಶಾಸಕಿಯವರ ನಡೆಕೆ ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಅವರ ಆದೇಶಗಳು ಸೂಚನೆಗಳನ್ನು ದಿಕ್ಕರಿಸಿರುವ ಶಾಸಕಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಸೂಕ್ತ ಕ್ರಮ ಕೈಗೊಂಡು ಶಾಸಕಿ ಸ್ಥಾನದಿಂದ ವಜಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ



