ಬೆಂಗಳೂರು:- ಮಹದೇವಪುರ. ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಬೆನ್ನಲ್ಲೇ ಈ ಕುರಿತು ಇಂದೇ ಪುರಾವೆ ಸಲ್ಲಿಸುವಂತೆ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚಿಸಿದೆ
ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಿಸಿದ್ದರು ಇದಾದ ಕೆಲವೇ ಕ್ಷಣಗಳಲ್ಲಿ ಭಾರತೀಯ ಚುನಾವಣಾ ಆಯೋಗ ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಕುರಿತು ಪುರಾವೆಗಳನ್ನು ಸಲ್ಲಿಸುವಂತೆ ಕೇಳಿದೆ
ಮತದಾರರ ಪಟ್ಟಿಯಲ್ಲಿನ ಅಕ್ರಮದ ಬಗ್ಗೆ ಮಾಡಲಾದ ಆರೋಪಗಳ ಕುರಿತು ಪುರಾವೆಗಳನ್ನು ಗುರುವಾರ ಆಗಸ್ಟ್ 7 2025ರಂದು ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ ಪುರಾವೆಗಳೊಂದಿಗೆ ಸಲ್ಲಿಸುವಂತೆ ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯು ರಾಹುಲ್ ಗಾಂಧಿಯವರಿಗೆ ಸೂಚಿಸಿದೆ
ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿ ಚುನಾವಣಾ ಪ್ರಕ್ರಿಯ ನೈತಿಕತೆಯನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಕರ್ನಾಟಕದ ಮತದಾರರ ಪಟ್ಟಿಯಿಂದ ಆಯ್ದ ಭಾಗಗಳನ್ನು ಪ್ರದರ್ಶಿಸಿ ಒಂದೇ ವಿಳಾಸದಲ್ಲಿ ನೂರಾರು ಮತದಾರರು ವಿಳಾಸಗಳು ಹಾಗೂ ನಕಲಿ ಹೆಸರುಗಳು ಸಲ್ಲಿಸಿರುದಾಗಿ ವಿವರಿಸಿದ್ದರು



