ಬಿ. ಸಿ. ರೋಡ್; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ ಇವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಬಂಟ್ವಾಳ ತಾಲೂಕಿನ ಎಲ್ಲಾ ಅರ್ಹ ಯುವಕ ಯುವತಿಯರು ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಯುವನಿಧಿ ಯೋಜನೆಯ ವಿಠ್ಠಲ್ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಸತೀಶ್, ಸಿರಾಜ್ ಹಾಗೂ ಕೃಷ್ಣಪ್ಪ ಇವರು ಉಪಸ್ಥಿತರಿದ್ದರು.



