ಆಗಸ್ಟ್ 10 : ಗಾಂಧಿ ಗ್ರಾಮವೆಂದ ಹೆಸರುವಾಸಿಯಾಗಿರುವ ಕೊಳ್ನಾಡು ಗ್ರಾಮ ಪಂಚಾಯತಿಯಿಂದ ಎರಡು ಬಾರಿ ಸ್ಪರ್ಧಿಸಿ, ಎರಡು ಬಾರಿ ಪಂಚಾಯತ್ ಸದಸ್ಯರಾಗಿ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಪಕ್ಷಕ್ಕೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಮೂರು ಬಾರಿ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಬೋರ್ಡ್ ಮಾಜಿ ಸದಸ್ಯರಾಗಿ, ಮಾಜಿ ಕೆಡಿಪಿ ಸದಸ್ಯರಾಗಿ, ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಕೊಳ್ನಾಡಿನ ಚಿರಪರಿಚಿತ ಜನಸೇವಕ, ಎ ಬಿ ಅಬ್ದುಲ್ ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಮಂತ್ರಿಗಳಾದ ಶ್ರೀ ಬಿ ರಮಾನಾಥ್ ರೈ ಅವರ ಶಿಫಾರಸಿನ ಮೇರೆಗೆ, ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನ (ಕೆಡಿಪಿ) ಸಮಿತಿಗೆ ಸದಸ್ಯರನ್ನಾಗಿ ನಾಮನಿರ್ದೇಶಿಸಿ ಆದೇಶಿಸಲಾಗಿದೆ
Subscribe to Updates
Get the latest creative news from FooBar about art, design and business.



