ಕಡಬ:- ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬೀಳುವ ಮೂಲಕ ಕಾಂಗ್ರೆಸ್ ಪಕ್ಷ 13 ಸ್ಥಾನಗಳಲ್ಲಿ 8 ಸ್ಥಾನ ಪಡೆಯುವ ಮೂಲಕ ಪಟ್ಟಣ ಪಂಚಾಯತ್ ನಲ್ಲಿ ಮೊದಲ ಭಾರಿಗೆ ಅಧಿಕಾರದ ಗದ್ದುಗೆ ಏರಲಿದೆ
ಇತ್ತ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳಾಗಿ ನಿರಂತರವಾಗಿ ಕಡಬ ಪಟ್ಟಣದಲ್ಲಿ 15 ದಿವಸ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬೇಕಾದ ಎಲ್ಲಾ ರಣತಂತ್ರ ರೂಪಿಸಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕುಳಾಲು ಅವರ ಕೆಲಸ ಕಾರ್ಯಗಳಿಗೆ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ



