ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ 2025 ರ ಸೆಪ್ಟೆಂಬರ್ 20 ಇಂದಿನಿಂದ ದಸರಾ ರಜೆ ಆರಂಭವಾಗಲಿದೆ.
ಈ ರಜೆಯು ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ಒಟ್ಟು 18 ದಿನಗಳವರೆಗೆ ಇರಲಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ವೇಳಾಪಟ್ಟಿಯನ್ನು ಘೋಷಿಸಿದೆ
ಈ ವೇಳಾಪಟ್ಟಿಯ ಪ್ರಕಾರ ದಸರಾ ರಜೆಯು ಸೆಪ್ಟೆಂಬರ್ 20. 2025 ರಿಂದ ಆರಂಭವಾಗಿ ಅಕ್ಟೋಬರ್ 7. 2025 ರವರೆಗೆ ಮುಂದುವರಿಯಲಿದೆ.
ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ..



