ವಿಟ್ಲ- ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೋಲಿಸರು ಬಂಧಿಸಿರುವ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೆ 22 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ (42ವ) ಎಂಬಾತ ಲೈಂಗಿಕ ಕಿರುಕುಳ ನೀಡಿರುವ ಕುರಿತು ನೀಡಿರುವ ದೂರಿಗೆ ಸಂಬಂಧಿಸಿದಂತೆ ವಿಟ್ಲ ಪೋಲಿಸ್ ಠಾಣೆಯಲ್ಲಿ ದಿನಾಂಕ 22-09- 2025 ರಂದು ಅಕ್ರ 133/2025 ಕಲಂ 7,8 POSCSO Act 2012 ಮತ್ತು 329( 4)
75 BNS -2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ



