ಕರಾವಳಿ ಜಿಲ್ಲೆಯ ಕಾಂಗ್ರೆಸ್ ಪ್ರಬಲ ನಾಯಕ ಎಂ.ಎಸ್ ಮಹಮ್ಮದ್ ಅವರಿಗೆ ತಪ್ಪಿದ ಅವಕಾಶ, ಜಿಲ್ಲೆಯಲ್ಲಿ ಭುಗಿಲೆದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ-
ಮಂಗಳೂರು:- ಕರ್ನಾಟಕ ಸರಕಾರದ ನಿಗಮ ಮಂಡಳಿಯ ವಿವಿಧ ಅಧ್ಯಕ್ಷರ ಆಯ್ಕೆ ನಡೆದಿದ್ದು ವಿಶೇಷವಾಗಿ ಕರಾವಳಿ ಜಿಲ್ಲೆಗೆ 5 ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ದೊರಕಿದ್ದು ಈ ಮಧ್ಯೆ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ದಿನದ 24 ಗಂಟೆಯು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುವ ಪ್ರಾಮಣಿಕ ಪಕ್ಷ ಸಂಘಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡದಿರುವುದರ ಬಗ್ಗೆ ಕರಾವಳಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂ.ಎಸ್ ಮಹಮ್ಮದ್ ಅವರು ಸಣ್ಣ ವಯಸ್ಸಿನಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿ ದ.ಕ.ಜಿಲ್ಲೆಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದ.ಕ.ಜಿಲ್ಲೆಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸತತ 3 ಭಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಉಡುಪಿ ಬೈಂದೂರು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಪಕ್ಷದ ಗೆಲುವಿಗಾಗಿ ಅಹೋರಾತ್ರಿ ಕೆಲಸ ಮಾಡಿದ ನಾಯಕರಾಗಿದ್ದಾರೆ.
ಇಷ್ಟು ಸೇವೆಗಳನ್ನು ಪಕ್ಷಕ್ಕೆ ನೀಡಿದರೂ ಎಂ.ಎಸ್ ಮಹಮ್ಮದ್ ಅವರಿಗೆ ನಿಗಮದಲ್ಲಿ ಅವಕಾಶ ನೀಡದಿರುವುದು ಎಷ್ಟು ಸರಿ ಎಂಬ ಮಾತು ಕಾರ್ಯಕರ್ತರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಪಕ್ಷದ ಚುನಾವಣೆಗಳಿಗೆ ಎಂ.ಎಸ್ ಮಹಮ್ಮದ್ ಅವರನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷ ಎಂ.ಎಸ್ ಮಹಮ್ಮದ್ ಅವರಿಗೆ ಅನ್ಯಾಯ ಮಾಡಿದೆ ಎಂದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ



