ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳೊಳಗೆ ತೀರ್ಪು ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ.
ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ನೇತೃತ್ವದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ತಾಜುದ್ದೀನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆ ಪೂರ್ಣಗೊಳ್ಳದೆ 16 ವರ್ಷಗಳಿಂದ ಜೈಲಿನಲ್ಲಿದ್ದಾರೆ ಎಂದು ಹೇಳಿದೆ.
2008 ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ 31 ನೇ ಆರೋಪಿ ಮದನಿ
ತಾಜುದ್ದೀನ್ 28 ನೇ ಆರೋಪಿ ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಆಗ್ರಹಾರ ಜೈಲಿನಲ್ಲಿ ಬಂಧನಕ್ಕೆ ಒಳಗಾಗಿರುವ ಮದನಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ



