ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡುವುದಿಲ್ಲ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಣೆ
ಬೆಂಗಳೂರು:- ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ ವಿತರಣೆ ಪ್ರಕ್ರಿಯೆ ತಿಂಗಳಲ್ಲಿ ಆರಂಭವಾಗುತ್ತದೆ. ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ
ಈಗಾಗಲೇ ರಾಜ್ಯದಲ್ಲಿ 13 ಲಕ್ಷ ಅನರ್ಹ ಕಾರ್ಡುಗಳನ್ನು ಹುಡುಕಿ ಪಟ್ಟಿ ಸಿದ್ದಪಡಿಸಿದ್ದೇವೆ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದರೆ ಮುಂದೆ ಬಂದು ಕಾರ್ಡುಗಳನ್ನು ಎಪಿಎಲ್ ಮಾಡಿಸಬೇಕು ಇದರಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಸಹಾಯವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡುಗಳು ರಾಜ್ಯದಲ್ಲಿವೆ ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ ಅನರ್ಹರನ್ನು ಬಿಪಿಎಲ್ ನಿಂದ ಎಪಿಎಲ್ ಗೆ ಹಾಕ್ತೇವೆ ಎಂದು ತಿಳಿಸಿದ್ದಾರೆ
ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಹೊಸ ಬಿಪಿಎಲ್ ಕಾರ್ಡ್ ದಾರರಿಗೆ ಅವಕಾಶ ಮಾಡಿಕೊಡಿ ಅನ್ನಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎಂದು ಸಚಿವರು ತಿಳಿಸಿದ್ದಾರೆ.



