ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪನಮನ*
ನವದೆಹಲಿ:- ನವದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪನಮನ ಸಲ್ಲಿಸಿದರು
ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಮೋದಿಯವರು ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು ಧೈರ್ಯ ಮತ್ತು ಸರಳತೆಗೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಸೇವೆ ಮತ್ತು ಕರುಣೆ ಜನರನ್ನು ಸಬಲೀಕರಣ ಗೊಳಿಸುವ ಅಗತ್ಯ ಸಾಧನ ಎಂದು ನಂಬಿದ್ದರು ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಅನ್ವೇಷಣೆಯಲ್ಲಿ ನಾವು ಅವರ ಮಾರ್ಗವನ್ನು ಅನುಸರಿಸುತ್ತೇವೆಂದು ಹೇಳಿದರು
ಮತ್ತೊಂದು ಪೋಸ್ಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನೆನೆದು ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಗೌರವ್ಯೂಹ ನಮನಗಳನ್ನು ತಿಳಿಸಿದ್ದಾರೆ



