ಮಾಜಿ ಸಚಿವ ಬಿ ರಮಾನಾಥ್ ರೈ, ವಿನಯಕುಮಾರ್ ಸೊರಕೆ ಭಾಗಿ
ಮಂಗಳೂರು:- ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ ಗಪೂರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಮಂಗಳೂರಿನ ಕುದ್ಮಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಎಂ.ಎ ಗಪೂರ್ ಅವರು ತಲಪಾಡಿಯಿಂದ ಕಾರವಾರದವರೆಗಿನ 350 ಕಿ ಮೀಟರ್ ವ್ಯಾಪ್ತಿಯ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ತನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ಹೇಳಿದರು.
ರಾಜ್ಯ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಅಭಿವೃದ್ಧಿ ಮಂಡಳಿಯಾಗಿ ಶಾಸನ ಮಾಡಿ ಅಧಿಕಾರ ನೀಡಿದೆ ಇದೀಗ ಅಗತ್ಯ ನೀತಿ ನಿಯಮಗಳ ಜಾರಿಯೊಂದಿಗೆ ಮಂಡಳಿ ಕಾರ್ಯ ನಿರ್ವಹಿಸಲಿದೆ
ಕರಾವಳಿ ಜಿಲ್ಲೆಗೆ ಹಿಂದಿನ ಎಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಹಾಲಿ ಸಚಿವರ ಮಾರ್ಗದರ್ಶನ ಸಲಹೆಯೊಂದಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡು ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ್ ರೈ ವಿನಯಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಜುನಾಥ್ ಭಂಢಾರಿ, ಗೇರು ನಿಗಮದ ಅಧ್ಯಕ್ಷರಾದ ಶ್ರೀಮತಿ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆರ್ ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ ಪದ್ಮರಾಜ್ ಆರ್ ಪೂಜಾರಿ, ಚೇತನ್ ಬೆಂಗ್ರೆ, ಟಿ.ಎಂ ಶಾಹೀದ್, ವಿಶ್ವಾಸ್ ದಾಸ್ ಕುಮಾರ್, ಪ್ರತಿಭಾ ಕುಳಾಯಿ, ಅಶೋಕ್ ಕೊಡವೂರ್, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು



