ದ.ಕ.ಗ್ರಾಮೀಣ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪ್ರಬಲ ನಾಯಕ ಎಂ.ಎಸ್ ಮಹಮ್ಮದ್ ಆಯ್ಕೆ ಸಾಧ್ಯತೆ*!
ಮಂಗಳೂರು:-ದ.ಕ.ಜಿಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು ಅದಕ್ಕಾಗಿ ಮುಖಂಡರ ಮಧ್ಯೆ ಲಾಭಿ ಜೋರಾಗಿದೆ.
ಇದೇ ಮೊದಲ ಭಾರಿಗೆ ನಗರ ಮತ್ತು ಗ್ರಾಮೀಣ ಅಧ್ಯಕ್ಷ ಎನ್ನುವ ಅಧಿಕಾರ ವಿಕೇಂದ್ರೀಕರಣದ ಸೂತ್ರ ಜಾರಿಯಾಗುವ ಸಾಧ್ಯತೆ ಇದ್ದು ಇದು ಆಕಾಂಕ್ಷಿಗಳ ಪಟ್ಟಿಯನ್ನು ಇನ್ನಷ್ಟು ಉದ್ದಗೊಳಿಸಿದೆ.
ಮುಖ್ಯವಾಗಿ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಇದೇ ಮೊದಲ ಭಾರಿಗೆ ಎಐಸಿಸಿ ಎಂಟ್ರಿ ನೀಡಲಿದೆ.
ಸುದೀರ್ಘ 8 ವರ್ಷ 4 ತಿಂಗಳಿನಿಂದ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೂಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನೀರಿಕ್ಷೆಯಿದೆ.
ಅಖಾಡಕ್ಕಿಳಿದ ಎಐಸಿಸಿ
ಇದುವರೆಗೆ ಸ್ಥಳೀಯ ನಾಯಕರ ಒಲವಿನಂತೆ ಕೆಪಿಸಿಸಿ ಮಟ್ಟದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು ಆದರೆ ಇದೇ ಮೊದಲ ಭಾರಿಗೆ ಜಿಲ್ಲಾ ನಾಯಕತ್ವ ಆಯ್ಜೆಗೆ ಎಐಸಿಸಿ ಆಸಕ್ತಿ ವಹಿಸಿದೆ
ಕರಾವಳಿಯಲ್ಲಿ ನೆಲಕಚ್ಚಿರುವ ಕಾಂಗ್ರೆಸ್ ಗೆ ಮರುಜೀವ ತುಂಬುವ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂಬ ಹಿನ್ನಲೆಯಲ್ಲಿ ಎಐಸಿಸಿ ಉಸ್ತುವಾರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಯಾವ ಅಭ್ಯರ್ಥಿಗೆ ಕಾರ್ಯಕರ್ತರ ಬೆಂಬಲ ಹೆಚ್ಚಿದೆಯೋ ಅವರಿಗೆ ಕಿರಿಟ ತೋಡಿಸುವ ಕೆಲಸ ಎಐಸಿಸಿ ಮಾಡಲಿದೆ ಎಂದು ತಿಳಿದು ಬಂದಿದೆ.
ಅಧಿಕಾರ ವಿಕೇಂದ್ರೀಕರಣ ಸೂತ್ರ
ಇದುವರೆಗೆ ಜಿಲ್ಲೆಗೆ ಒಬ್ಬರೇ ಅಧ್ಯಕ್ಷರಿದ್ದರು ಈ ಸಲ ಮೊದಲ ಭಾರಿಗೆ ನಗರ ಮತ್ತು ಗ್ರಾಮೀಣ ವ್ಯಾಪ್ತಿ ತಲಾ ,4 ವಿಧಾನ ಸಭಾ ಕ್ಷೇತ್ರಗಳು ಎಂದು ಅಧಿಕಾರ ವಿಭಜನೆ ಮಾಡುವ ಸಾಧ್ಯತೆ ಹೆಚ್ಚಿದೆ
ಈಗಾಗಲೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕಾರ ವಿಕೇಂದ್ರೀಕರಣ ಮಾಡಿರುವುದರಿಂದ ಅಧ್ಯಕ್ಷ ಸ್ಥಾನವು ಇದೇ ಮಾದರಿಯಲ್ಲಿ ಇರಬಹುದು ಅಥಾವ ಕೊನೆಯ ಹಂತದಲ್ಲಿ ಹಿಂದಿನ ವ್ಯವಸ್ಥೆಯನ್ನು ಮುಂದುವರಿಸಬಹುದು ಎಐಸಿಸಿ ನಿರ್ಧಾರದಂತೆ ನಡೆಯಲಿದೆ ಎನ್ನುತ್ತಾರೆ ಪಕ್ಷದ ಮುಖಂಡು
ಇತ್ತ ಈ ಎಲ್ಲಾ ಅಂಶಗಳನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯ ನಾಯಕರು ದ.ಕ.ಗ್ರಾಮೀಣ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಕ್ಷದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖರಾಗಿ ಎಂ.ಎಸ್ ಮಹಮ್ಮದ್ ಅವರನ್ನು ಆಯ್ಕೆ ಮಾಡುವ ಬಗ್ಗೆ ಬಹುತೇಕ ಅಂತಿಮವಾಗಿದೆ ಎಂಬ ಮಾತುಗಳು ಕಾಂಗ್ರೆಸ್ ಹೈಕಮಾಂಡ್ ಎಐಸಿಸಿ ವಲಯದಲ್ಲಿ ಕೇಳಿ ಬಂದಿದೆ..



