ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮನ-
ಬಂಟ್ವಾಳ:- ದೇಶಾದ್ಯಂತ ನಡೆದ ಮತಗಳ್ಳತನದ ವಿರುದ್ಧ ದ.ಕ.ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ನವಾಜ್ ಅವರ ನೇತೃತ್ವದಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯುವ ಮೂಲಕ ರಾಹುಲ್ ಗಾಂಧಿಯವರ ಕೈಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಮಾಡಿಕೊಂಡು ಬಂದಿದೆ.
ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಆದೇಶದಂತೆ ಯುವ ಕಾಂಗ್ರೆಸ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಇದರ ಸಂಯಕ್ತ ಆಶ್ರಯದಲ್ಲಿ ಅಕ್ಟೋಬರ್ 10 ಶುಕ್ರವಾರ ದಿವಸ ಸಂಜೆ 5:30 ಕ್ಕೆ ಬಿಸಿರೋಡ್ ನಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಘನ ಸರ್ಕಾರದ ಕಾರ್ಮಿಕ ಸಚಿವ ಶ್ರೀ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ.
ಕರ್ನಾಟಕ ಸರಕಾರದ ಮಾಜಿ ಸಚಿವ ಬಿ ರಮಾನಾಥ್ ರೈ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಇಬ್ರಾಹಿಂ ನವಾಝ್ ಹಾಗೂ ಮೊದಲಾದ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ವಿನಯಕುಮಾರ್ ಸಿಂದ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..



