ರಾಜ್ಯದಲ್ಲಿ ಇನ್ನೂ ಮುಕ್ತಾಯಗೊಳ್ಳದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ
ಬೆಂಗಳೂರು:- ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು
ಆದರೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ನಡೆದಂತಹ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು ಅದರಂತೆ ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ.
ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.



