ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆಸ್ಪತ್ರೆಗೆ ದಾಖಲು
ಬೆಂಗಳೂರು:- ಮಾಜಿ ಪ್ರಧಾನಿ ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೆಗೌಡ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ದೇವೆಗೌಡ ಅವರ ಆರೋಗ್ಯದಲ್ಲಿ ಏರಪೇರಾಗಿದ್ದು ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.



