ಮಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಮಂಗಳೂರು:- ರಾಜ್ಯದ ಸರ್ಕಾರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ದತೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕಾತಿ ನಡೆದಿತ್ತು ತಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದದ್ದು ಮತ್ತೆ 18,500 ಶಿಕ್ಷಕರ ನೇಮಕಾತಿಗೆ ಸಿದ್ದತೆ ನಡೆದಿದೆ ಎಂದರು
ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯಲ್ಲಿ ವಿಳಂಭವಾಗಿದೆ ಎಂದು ಅವರು ತಿಳಿಸಿದರು
ಎಲ್ ಕೆಜಿಯಿಂದ 12ನೇ ತರಗತಿವರೆಗೆ ಕೆಪಿಎಸ್ ಮಾದರಿಯಡಿ ಶೇ 80 ರಷ್ಟು ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆರಿಸಲಾಗಿದೆ.
ಈ ಶಾಲೆಗಳಲ್ಲಿ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಅವರು ಹೇಳಿದರು.
ಇದೇ ವೇಳೆ 3 ,ನೇ ಸ್ತರದ ಪರೀಕ್ಷಾ ಪದ್ದತಿಯೂ ಕೂಡ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ ಈ ಪರೀಕ್ಷಾ ವ್ಯವಸ್ಥೆಯಿಂದ 2 ನೇ ಸ್ತರ ಹಾಗೂ ಮೂರನೇ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11,6000 ಮಕ್ಕಳು ಉತ್ತೀರ್ಣರಾಗಿದ್ದು ಪಿಯುಸಿಯಲ್ಲಿಯೂ 56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು



