ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಟ ಕಳ್ಳತನಕ್ಕೆ ಬ್ರೇಕ್ ಹಾಕಲು ಸರ್ಕಾರದ ತೀರ್ಮಾನ
ಬೆಂಗಳೂರು:- ಅನ್ನಭಾಗ್ಯ ಯೋಜನೆಯಡಿ ಎಎವೈ ಮತ್ತು ಪಿಎಚ್ ಎಚ್ ಪಡಿತರ ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆ.ಜಿ ಅಕ್ಕಿ ಇಂದಿರಾ ಆಹಾರ ಕಿಟ್ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇಂದಿರಾ ಕಿಟ್ ನಲ್ಲಿ 2 ಕೆಜಿ ತೊಗರಿ ಬೇಳೆ, 1ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ, ಹಾಗೂ 1 ಕೆ.ಜಿ ಉಪ್ಪು ಇರಲಿದೆ.
5 ಕೆ.ಜಿ ಅಕ್ಕಿ ಬದಲಿಗೆ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ.
ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ ಅನುದಾನದಲ್ಲಿ 6119.52 ಕೋಟಿ ರೂ ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಿದೆ.



