ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಡ್ಡಿ ಆರೋಪ
ಬೆಂಗಳೂರು:- ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ಇದೇ 10 ರಂದು ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಸಂಚಾಲಕ ಬಸವರಾಜ ಕೌತಳ ಎಚ್ ಎನ್ ನಾಗಮೋಹನ ದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗ ಗಳನ್ನಾಗಿ ಮಾಡಿ ಒಳ ಮೀಸಲಾತಿ ಸಂಬಂಧ ಏಳು ಶಿಪಾರಸ್ಸುಗಳನ್ನು ಮಾಡಿತ್ತು ಆದರೆ ಸರ್ಕಾರ ಮೂರು ಪ್ರವರ್ಗಗಳಾನ್ನಾಗಿ ವಿಂಗಡಿಸಿ ಪ್ರವರ್ಗ ಎ’ಗೆ’ ಶೇಕಡಾ 6 ಪ್ರವರ್ಗ ಬಿ ಗೆ ಶೇ 6 ಹಾಗೂ ಪ್ರವರ್ಗ ಸಿ ಗೆ ಶೇ 5 ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದೆ ಆದರೆ ಇದುವರೆಗೂ ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು.
ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಆಯುಕ್ತ ರಾಕೇಶ್ ಕುಮಾರ್ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಒಳ ಮೀಸಲಾತಿ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ.
ಬಡ್ತಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅನ್ವಯಿಸುವುದಿಲ್ಲ ಎಂದು ದಾರಿ ತಪ್ಪಿಸುತ್ತಿದ್ದಾರೆ ಮಹದೇವಪ್ಪ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು



