ಆದೇಶ ಹಿಂಪಡೆದ ಸರಕಾರ ಪಿಐಎಲ್ ಇತ್ಯರ್ಥ
ಬೆಂಗಳೂರು:- ಮುಸ್ಲಿಮರ ವಿವಾಹ ನೋಂದಣಿ ಹಾಗೂ ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಪ್ ಮಂಡಳಿಗೆ ನೀಡಿ 2023 ರ ಆಗಸ್ಟ್ 30 ರಂದು ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ.
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರಿನ ಆಲಂ ಪಾಷಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಸರಕಾರ ಪರ ವಕೀಲರು ನ್ಯಾಯಲಕ್ಕೆ ಪ್ರಮಾಣಪತ್ರ ಸಲ್ಲಿಸಿ ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಹಾಗೂ ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಪ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯ ಮೂಲಕ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು
ಸರಕಾರದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಪಿಐಎಲ್ ಇತ್ಯರ್ಥಪಡಿಸಿತು.
2024 ರ ನವೆಂಬರ್ 21 ರಂದು ಹೈಕೋರ್ಟ್ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು
ವಕ್ಪ್ ಕಾಯ್ದೆ 1995 ರ ಅನ್ವಯ ವಕ್ಪ್ ಆಸ್ತಿಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದು ವಕ್ಪ್ ಮಂಡಳಿಯ ಕಾರ್ಯವ್ಯಾಪ್ತಿಯಾಗಿದೆ
ಕರ್ನಾಟಕ ವಿವಾಹ ನೋಂದಣಿ ಕಾಯ್ದೆ 1976 ರ ಪ್ರಕಾರ ಉಪ ನೋಂದಣಾಧಿಕಾರಿಗೆ ವಿವಾಹ ನೋಂದಣಿ ಅಧಿಕಾರವಿದೆ
ಮುಸ್ಲಿಮರಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಸಂಬಂಧ 2009 ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ 20011 ,ರಲ್ಲಿ ರದ್ದುಪಡಿಸಿದೆ.
ಇದಾದ ಬಳಿಕ ಸರಕಾರ ಪರಿಷ್ಕೃತ ಆದೇಶಗಳನ್ನು ಹೊರಡಿಸಿದೆ.
ಈಗಾಗಲೇ ಉಪ ನೋಂದಣಾಧಿಕಾರಿಗಳ ಬಳಿ ವಿವಾಹ ನೋಂದಣಿಗೆ ಅವಕಾಶವಿದೆ ಅಲ್ಲದೇ ಸ್ಥಳೀಯ ಖಾಝಿಗಳ ಬಳಿಯೂ ವಿವಾಹ ದಾಖಲೆ ಇರಲಿದೆ
ಅದಾಗ್ಯೂ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಪ್ ಮಂಡಳಿಗೆ ನೀಡುವ ಮೂಲಕ ಮೂರನೇ ವ್ಯವಸ್ಥೆಯೂಂದನ್ನು ಹುಟ್ಟು ಹಾಕಲಾಗಿದೆ.
ಸರಕಾರದ ಆದೇಶ ವಕ್ಪ್ ಕಾಯ್ದೆ 1995 ಹಾಗೂ ಸಂವಿಧಾನದ ಪರಿಚ್ಚೇದ 14ಕ್ಕೆ ತದ್ದಿರುದ್ದವಾಗಿದೆ ಆದ್ದರಿಂದ ಅದನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು



