ಪ್ರಮುಖ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಕೊನೆಗೂ ನ್ಯಾಯಲಕ್ಕೆ ಶರಣು
ಬಂಟ್ವಾಳ:- ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಅ.ಕ್ರ 169/2017 500:143 147 148 447 448 302 120( ಬಿ) 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ನ್ಯಾಯಲಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೆಲ್ ಅ.10 ರಂದು ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಕ್ಕೆ ಹಾಜರಾಗಿದ್ದು ನ್ಯಾಯಾಲವು ಆರೋಪಿಗೆ 25- 10- 2025 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ..
ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2025 ಕಲಂ 103 109 118(1) 190 191(1) 118(2) 191( 2) 191(3) ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದ್ದು ಈ ಪ್ರಕರಣದ ಎ 1 ಆರೋಪಿ ಭರತ್ ಕುಮ್ಡೆಲ್ ಪ್ರಕರಣ ದಾಖಲಾದ ದಿನದಿಂದಲೇ ತಲೆಮರೆಸಿಕೊಂಡಿದ್ದು ಈತನ ಮೇಲೆ ಈಗಾಗಲೇ ಹಲವು ಪ್ರಕರಣ ದಾಖಲಾಗಿದೆ.



