ನವೆಂಬರ್ ಕ್ರಾಂತಿಯ ಬಗ್ಗೆ ರಾಜ್ಯದಲ್ಲಿ ಒಡಾಡುತ್ತಿದೆ ಸ್ಪೋಟಕ ಸುದ್ದಿ
ಬೆಂಗಳೂರು:- ಅ.10 ನವೆಂಬರ್ ಕ್ರಾಂತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರಿಗೆ ಕರೆದಿರುವ ಔತಣಕೂಟಕ್ಕೂ ನಿಕಟ ಸಂಬಂಧವಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಿಸಿದ್ದಾರೆ.
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕಾಂಗ್ರೆಸ್ಸಿನಲ್ಲಿ ದೊಡ್ಡ ಬೆಳವಣಿಗೆ ನಡೆಯುತ್ತಿದೆ ಎಂಬುದು ಜನರ ಅನಿಸಿಕೆಯಾಗಿದೆ.
ಸಿಎಂ ಡಿನ್ನರ್ ಮೀಟಿಂಗ್ ಕರೆದಿದ್ದಾರೆ ಕೆಲಸ ಸಚಿವರು ಬೇರೆ ಬೇರೆ ಸಭೆ ನಡೆಸುತ್ತಿದ್ದಾರೆ ಇವೆಲ್ಲ ಕ್ರಾಂತಿಯ ಆಜುಬಾಜು ಓಡಾಡುವ ವಿಚಾರಗಳು ಒಟ್ಟಾರೆ ಹೇಳುವುದಾದರೆ ಡಿನ್ನರ್ ಮೀಟಿಂಗ್ ಎಂದರೆ ಅದೂಂದು ವಿಶೇಷತೆ ಎಂದರು
ಇದು ಸಿಎಂ ಸಿದ್ದರಾಮಯ್ಯನವರ ಅಧಿಕಾರದ ಅಂತ್ಯವೇ ಡಿಕೆ ಶಿವಕುಮಾರ್ ಗುಂಪು ಹೇಳುವ ರೀತಿಯಲ್ಲಿ ನವೆಂಬರ್ ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಧಿಕಾರವಧಿ ಪ್ರಾರಂಭವೇ ಎಂದು ಪ್ರಶ್ನಿಸಿದ ಅವರು ದಲಿತರನ್ನು ಮುಖ್ಯಮಂತ್ರಿ ವಿಚಾರದಲ್ಲಿ 75 ಕ್ಕೂ ಹೆಚ್ಚು ವರ್ಷಗಳಿಂದ ವಂಚಿಸಿದ ಕಾಂಗ್ರೆಸ್ ಪಕ್ಷವು ಈಗಲಾದರೂ ದಲಿತ ಸಿಎಂ ವಿಚಾರಕ್ಕೆ ತೆರೆ ಎಳೆಯಲಿ ಎಂದರು
ಸಿಎಂ ಆಗಿ ಡಾ ಜಿ ಪರಮೇಶ್ವರ್ ಅವರನ್ನು ಮಾಡುವ ವಿಚಾರ ನಿನ್ನೆಯಿಂದ ಹೊರಕ್ಕೆ ಬರುತ್ತಿದೆ ಸಿದ್ದರಾಮಯ್ಯ ಕಡೆಯವರು ಈ ಕುರಿತು ಮಾತನಾಡುತ್ತಿದ್ದು ಸಿದ್ದರಾಮಯ್ಯನವರು ಡಾ ಪರಮೇಶ್ವರ ಅವರನ್ನು ತರಬೇಕೆಂದು ಯೋಚಿಸಿದ್ದಾರೆ ಹೀಗೆ ಅನೇಕ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಬರುತ್ತಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದರು



