ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಸಂತೋಷ್ ಲಾಡ್
ಬೆಂಗಳೂರು:- ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿಯಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬದಲಾಗುತ್ತಾರೆ ನಿತಿನ್ ಗಡ್ಕರಿ ಹೊಸದಾಗಿ ಪ್ರಧಾನಿಯಾಗುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಪ್ರಧಾನಿಯವರು ತಮ್ಮ ಹುದ್ದೆಯ ಜವಬ್ದಾರಿ ಮರೆತು ನಡೆದುಕೊಳ್ಳುತ್ತಿದ್ದಾರೆ .
ವಿದೇಶಗಳಿಗೆ ಹೋದರೆ ಏನೋ ಒಂದು ಮಾತನಾಡುತ್ತಾರೆ.ವಿಧಾನಸಭೆಯ ಚುನಾವಣೆ ಪ್ರಚಾರಕ್ಕೆ ಹೋದಾಗ ಪ್ರಾಸ ಬದ್ದವನ್ನಾಗಿ ಮಾತನಾಡುತ್ತಾರೆ.
ಇದು ಪ್ರಧಾನಿ ಅವರ ಕೆಲಸವೇ ಎಂದು ಆಕ್ಷೇಪಿಸಿದರು.
ಬಿಜೆಪಿಯಲ್ಲಿನ ಆಂತರಿಕ ಚರ್ಚೆಗಳನ್ನು ನಾನು ಹೇಳುತ್ತಿದ್ದೇನೆ.
ಮೋದಿ ಅವರ ವಿರುದ್ಧ ಬಿಜೆಪಿಯ ನಾಯಕರಾಗಲಿ ಮಾಧ್ಯಮದರಾಗಲಿ ಮಾತನಾಡಲು ಅವಕಾಶ ಇಲ್ಲದಂತಹ ವಾತವಾರಣವಿದೆ.
ಹೀಗಾಗಿ ಡಿಸೆಂಬರ್ ಒಳಗಾಗಿ ಬದಲಾವಣೆಯಾಗುತ್ತದೆ ಎಂದರು



