ರಮೇಶ್ ಕತ್ತಿ ಬಣಕ್ಕೆ ಶಾಕ್
ಬೆಳಗಾವಿ:- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ.
ಬಿಜೆಪಿಯ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಚುನಾವಣೆಗಾಗಿ ಒಂದಾದ ಹಿನ್ನಲೆಯಲ್ಲಿ ಜಾರಕಿಹೊಳಿ ಬಣದ 6 ಮಂದಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರೆ.
ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ,ಯರಗಟ್ಟಿಯಿಂದ ವಿಶ್ವಾಸ್ ವ್ಯದ್ಯ, ಮೂಡಲಗಿಯಿಂದ ನೀಲಕಂಠ,ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೂಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ,ಆವಿರೋಧ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಅಕ್ಟೋಬರ್ 13 ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.



