ಇನ್ನೊರ್ವ ವಿದ್ಯಾರ್ಥಿ ಗಂಭೀರ
ಪುತ್ತೂರು:- ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ ಇನ್ನೊರ್ವ ವಿದ್ಯಾರ್ಥಿ ಗಂಭೀರವಾಗಿದ್ದು ಹೆಜ್ಜೆನು ದಾಳಿ ಸಂದರ್ಭದಲ್ಲಿ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ.
ಅ.10 ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅ.11ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಮೃತಪಟ್ಟವರನ್ನು ಪಡೂರು ಗ್ರಾಮದ ಕೋಟೆಲು ನಿವಾಸಿ ಕಿರಣ್ ಎಂಬವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಇಶಾ( 7) ಎಂದು ಗುರುತಿಸಲಾಗಿದೆ
ಅ.10ರಂದು ಸಂಜೆ ವಿದ್ಯಾರ್ಥಿಗಳಾದ ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ ಮತ್ತು ಕಿಶೋರ್ ಎಂಬವರ ಪುತ್ರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರತ್ಯಶ್ ಮತ್ತು ಸ್ಥಳೀಯ ನಾರಾಯಣ್ ಹಜ್ಜೇನು ದಾಳಿಗೊಳಾಗಿದ್ದರು ಸಂಜೆ ಮನೆಗೆ ತೆರಳುತ್ತಿದ್ದಾಗ ಕೂಟೇಲು ಸಮೀಪ ಹೆಜ್ಜೇನುಗಳು ಏಕಾಏಕಿ ವಿದ್ಯಾರ್ಥಿಗಳಿಬ್ಬರ ಮೇಲೆ ದಾಳಿ ಮಾಡಿದೆ.
ವಿದ್ಯಾರ್ಥಿಗಳು ಕಿರುಚಾಡುವುದನ್ನು ಕೇಳಿ ಸ್ಥಳೀಯರಾದ ನಾರಾಯಣ್ ಎಂಬವರು ವಿದ್ಯಾರ್ಥಿಗಳ ರಕ್ಷಣೆಗೆ ಬಂದಿದ್ದರು ಈ ವೇಳೆ ಹೆಜ್ಜೇನು ಅವರಿಗೂ ಕಚ್ಚಿದೆ ಗಾಯಗೊಂಡ ನಾರಾಯಣ್ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ವಿದ್ಯಾರ್ಥಿಗಳಿಬ್ಬರನ್ನೂ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗಾಯಳುಗಳ ಪೈಕಿ ತೀವ್ರ ಅಸ್ತವಸ್ಥಗೊಂಡ ಇಶಾ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಪ್ರತ್ಯಶ್ ಆರೋಗ್ಯದಲ್ಲೂ ಏರುಪೇರಾಗಿದ್ದು ಅವರನ್ನು ಕೂಡ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುಲಾಗಿದೆ ಎಂದು ತಿಳಿದು ಬಂದಿದೆ.



