ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ್ದನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗೋಪಿನಾಥನ್
ಹೊಸದಿಲ್ಲಿ:- ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಣ್ಣನ್ ಗೋಪಿನಾಥನ್ ದೇಶದ ದೀನದಲಿತರ ಮತ್ತು ದುರ್ಬಲ ಜನರ ಬಗ್ಗೆ ಕಾಳಜಿಯನ್ನು ಹೊಂದಿರುವ ಮತ್ತು ಯಾವಾಗಲೂ ನ್ಯಾಯ ಮತ್ತು ಏಕತೆಗಾಗಿ ಹೋರಾಡುವ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರು ಎಂದು ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ವಿರೋಧಿಸಿ ಕಣ್ಣನ್ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು ಭಾರತೀಯ ಆಡಳಿತ ಸೇವೆಯಿಂದ ನಿವೃತ್ತಿ ಹೊಂದಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.



