ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧವನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗುತ್ತಿರುವ ಪೋಲಿಸ್ ಇಲಾಖೆ
ಬಂಟ್ವಾಳ:- ಕಳೆದ ಕೆಲವು ದಿನಗಳ ಹಿಂದೆ ಬೊಲೆರೂ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಅವರು ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೋಲಿಸರು ಬಂಧಿಸಿದ್ದಾರೆ.
ಇದರೊಂದಿಗೆ ಗಾಂಜಾ ಸಾಗಟ ಪ್ರಕರಣದಲ್ಲಿ ಮತ್ತೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಪರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್ ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 8 ರಂದು ಬಂಟ್ವಾಳ ನಗರ ಠಾಣಾ ಪಿಎಐ ಸಂದೀಪ್ ಕುಮಾರ್ ಶೆಟ್ಟಿ ಅವರು ಗಸ್ತು ತಿರುಗುತ್ತಿದ್ದಾಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ ಪಿ ಎಸ್ ವಿಜಯಪ್ರಸಾದ್ ಅವರ ಸೂಚನೆಯಂತೆ ಈ ಕಾರ್ಯಚರಣೆ ನಡೆಸಲಾಯಿತು.
ಬಂಟ್ವಾಳ ನಗರ ಠಾಣಾ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಅವರ ನೇತ್ರತ್ವದಲ್ಲಿ ಪಿಎಸ್ ಐ ಗಳಾದ ಸಂದೀಪ್ ಕುಮಾರ್ ಶೆಟ್ಟಿ ಮತ್ತು ದುರ್ಗಪ್ಪ ಎಎಸ್ ಐ ನಾರಾಯಣ ಮತ್ತು ನವೀನ್ ಕುಮಾರ್ ಹಾಗೂ ಇತರೆ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು



