ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಸಿಎಂ ಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೆ ತವರು ಜಿಲ್ಲೆ ಕಲಬುರಗಿಯಲ್ಲಿ ಆರೆಸ್ಸೆಸ್ ಬೈಠಕ್
ಬೆಂಗಳೂರು:- ಆರೆಸ್ಸೆಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ
ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ ನಡೆಸಿರುವ ಸುದ್ದಿ ಎಲ್ಲಡೆ ವೈರಲ್ ಆಗುತ್ತಿದೆ.
ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತ್ವೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆಯಲ್ಲಿ ಆರೆಸ್ಸೆಸ್ ಬೈಠಕ್ ನಡೆದಿದೆ.
ಅಷ್ಟೇ ಅಲ್ಲದೇ ಶಾಲೆಯ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ ಬೌದ್ದಿಕ ಕಾರ್ಯಕ್ರಮ ಕೂಡ ನಡೆದಿದೆ



