ಯಾರು ಬೆದರಿಕೆ ಕರೆ ಮಾಡಿದ್ದಾರೆ ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ.
ಬೆಂಗಳೂರು:- ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಬೆದರಿಕೆ ಕರೆ ಮಾಡಿದ್ದಾರೆ ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ ಆರೆಸ್ಸೆಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು ಆ ಬಗ್ಗೆ ಸರಕಾರ ತೀರ್ಮಾನ ಮಾಡುತ್ತದೆ ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ಹೇಳಿದರು
ಸರಕಾರ ಬಂದು ಎರಡೂವರೆ ವರ್ಷ ಕಳೆದಿದೆ ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತನಾಡಿದ್ದೇವೆ ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು
ಯಾದಗಿರಿ ಎಎಸ್ಐ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆಂಬ ಮಾಜಿ ಸಚಿವ ರಾಜುಗೌಡ ಆರೋಪದ ಕುರಿತು ಪ್ರತಿಕ್ರಿಯಿಸಿ ಈ ಬಗ್ಗೆ ವರದಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಸೂಚಿಸಿದ್ದೇನೆ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಬಿಜೆಪಿ ಅವರು ಟೀಕೆ ಮಾಡುವುದರಲ್ಲಿ ನಿಸ್ಸೀಮರು ಅದು ಅವರ ಕರ್ತವ್ಯ ಕೂಡ ಹೌದು ನಾನು ಹೇಳಿರುವುದು ಒಂದೇ ಪಾಸಿಟಿವ್ ಕ್ರಿಟಿಸಸಂ ಮಾಡಿ ರಾಜಕೀಯಕ್ಕಾಗಿ ಟೀಕೆ ಮಾಡುವುದು ಬೇಡ ಎಂದರು



