ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಯವರು ವರ್ಗಾವಣೆ-
ಪುತ್ತೂರು:- ಪುಣಚ ಗ್ರಾಮ ಪಂಚಾಯತ್ ನ ನೂತನ ಪ್ರಭಾವ ಅಭಿವೃದ್ಧಿ ಅಧಿಕಾರಿಯಾಗಿ ಸೃಜನ್ ಎ.ಜಿಯವರು ಅಧಿಕಾರವಹಿಸಿಕೊಂಡಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ರವಿಯವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಸೃಜನ್ ಎ.ಜಿಯವರು ಅಧಿಕಾರ ವಹಿಸಿಕೊಂಡಿದ್ದು ಪ್ರಸ್ತುತ ಇವರು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದೊಡ್ಡಡ್ಕ ನಿವಾಸಿಯಾಗಿದ್ದಾರೆ ಸೃಜನ್ ರವರು ಈ ಹಿಂದೆ ಸುಳ್ಯದ ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ ಗ್ರೇಡ್-1 ಕಾರ್ಯದರ್ಶಿಯಾಗಿ ಪ್ರಭಾರ ಪಿಡಿಓ ಆಗಿ ಕರ್ತವ್ಯ ನಿರ್ವಹಿಸಿದ್ದರು ಅಲ್ಲಿಂದ ವರ್ಗಾವಣೆಗೊಂಡು ಪುಣಚ ಗ್ರಾಮ ಪಂಚಾಯತಿಗೆ ಬಂದಿದ್ದು ಹೆಚ್ಚುವರಿಯಾಗಿ ಕರೋಪಾಡಿ ಗ್ರಾಮ ಪಂಚಾಯತ್ ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಲಿದ್ದಾರೆ



