ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ನೀರಿಕ್ಷೆ
ಪುತ್ತೂರು:-ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಶೋಕ ಜನ-ಮನ ಕಾರ್ಯಕ್ರಮ ಅ.20 ರಂದು ಭಾನುವಾರ ದಿವಸ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮುತ್ತಿನ ನಗರಿ ಪುತ್ತೂರಿಗೆ ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಲವು ಭಾಗ್ಯಗಳ ಭಾಗ್ಯದಾತ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಶೇಷವಾಗಿ ಶಾಸಕ ಅಶೋಕ್ ಕುಮಾರ್ ರೈ ಅವರು ಶಾಸಕರಾದ ನಂತರ ಮೊದಲ ಭಾರಿಗೆ ಸಿಎಂ ಪುತ್ತೂರಿಗೆ ಭೇಟಿ ನೀಡುತ್ತಿದ್ದಾರೆ.



