ಸರ್ಕಾರಿ ನೌಕರರಿಗೂ ಅಂಕುಶ
ಬೆಂಗಳೂರು:- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನು ನಿರ್ಬಂಧಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆಯವರು ಬರೆದಿದ್ದ ಪತ್ರ ಸಾಕಷ್ಟು ವಾಗ್ವದಗಳಿಗೆ ಎಡೆಮಾಡಿಕೊಟ್ಟಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಯಾವುದೇ ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥಾವ ರಾಜಕಾರಣದಲ್ಲಿ ಭಾಗವಹಿಸುವಂತಹ ಯಾವುದೇ ಸಂಘ ಸಂಸ್ಥೆಯ ಸದಸ್ಯರಾಗುವಂತದ್ದಲ್ಲ ಅಥಾವ ಅವುಗಳೊಂದಿಗೆ ಅನ್ಯತಾ ಸಂಬಂಧ ಹೊಂದಿರತಕ್ಕದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಚಟುವಟಿಕೆಗಳಲ್ಲಿ ಭಾಗವಹಿಸತ್ಕದಲ್ಲ ಅದರ ಸಹಾಯರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಕರ್ನಾಟಕ ನಾಗರಿಕ ಸೇವಾ ನಿಯಮಗಳಲ್ಲಿ ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ ಎಂದು ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಉಲ್ಲೇಖಿಸಿದ್ದಾರೆ.
ನಾಗರೀಕ ಸೇವಾ ನಿಯಮಗಳಲ್ಲಿ ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಳ್ಳುತ್ತಿದ್ದಾರೆ ಎಂಬುದನ್ನು ಪತ್ರದ ಮೂಲಕ ಪ್ರಿಯಾಂಕ್ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಆರೆಸ್ಸೆಸ್ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುಬ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸೂಕ್ತ ನಿರ್ದೇಶನ ನೀಡುವಂತೆ ಪ್ರಿಯಾಂಕ್ ಖರ್ಗೆಯವರು ಪತ್ರದಲ್ಲಿ ಮನವಿ ಮಾಡಿದ್ದಾರೆ
ಆರೆಸ್ಸೆಸ್ ಚಟುವಟಿಕೆಗಳಿಗೆ ಶಾಲಾ- ಕಾಲೇಜು ಸಾರ್ವಜನಿಕ ಸ್ಥಳ ಧಾರ್ಮಿಕ ಸಂಸ್ಥೆಗೆ ಸೇರಿದ ಸ್ಥಳಗಳಲ್ಲಿ ಅವಕಾಶ ನೀಡಬಾರದು ಎಂದು ಪ್ರಿಯಾಂಕ್ ಖರ್ಗೆಯವರು ಬರೆದಿದ್ದ ಪತ್ರ ಸಾಕಷ್ಟು ಗದ್ದಲಕ್ಕೆ ಕಾರಣವಾಗಿತ್ತು
ಇಷ್ಟೆಲದರ ಮಧ್ಯೆಯೇ ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರುವ ನಿರ್ಬಂಧವನ್ನು ಕಟ್ಟು ನಿಟ್ಟಾಗಿ ಜಾರಿ ಮಾಡುವಂತೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಸಂಘ ಪರಿವಾರದ ಬೆಂಬಲಿಗರ ಕೆಂಗಣ್ಣಿಗೆ ಮತ್ತೆ ಗುರಿಯಾಗಿದ್ದಾರೆ



