ದಿನೇಶ್ ಅಮಿನ್ ಮಟ್ಟು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರ ನಡುವೆ ಟಾಕ್ ವಾರ್
ಮಂಗಳೂರು:- ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ನ ಯಾವುದೇ ಚಟುವಟಿಕೆ ನಡೆದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.
ಅವರು ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸರಕಾರದ ಕೈಗಾರಿಕಾ ಸಂಸ್ಥೆಯ ಮೂಲಕ ರಾಜ್ಯದ ಸುಮಾರು 300 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಸೃಷ್ಟಿ ಎಂಬ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿದ್ದು ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಕಾರ್ಯಕ್ರಮ ಅದಾಗಿದ್ದು ಸರಕಾರದ ಹಿರಿಯ ಅಧಿಕಾರಿಗಳು ವಿವಿಧ ಐಟಿ ಕಂಪನಿಗಳವರು ಅದರಲ್ಲಿ ಭಾಗವಹಿಸಿದ್ದರು ವಿದ್ಯಾರ್ಥಿ ಸಂಘಟನೆಯಾಗಿ ಎಬಿವಿಪಿ ಬೆಂಬಲ ನೀಡಿತ್ತು ಅದು ವಿದ್ಯಾರ್ಥಿಗಳ ಪ್ರಾಜೆಕ್ಟ್ ಆಧಾರಿತ ಕಾರ್ಯಕ್ರಮ ಎಂಬ ನೆಲೆಯಲ್ಲಿ ಅವಕಾಶ ನೀಡಲಾಗಿತ್ತು ಹೊರತು ಅಲ್ಲಿ ಯಾವುದೇ ಆರ್ ಎಸ್ ಎಸ್ ಚಟುವಟಿಕೆ ಅಥವಾ ಬೈಠಕ್ ನಡೆಸಲಾಗಿಲ್ಲ ಎಂದು ಹೇಳಿದರು
ನಾನು ಎನ್.ಎಸ್ ಯು.ಐ ನಾಯಕನಾಗಿ ಬೆಳೆದವನು ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ನನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿದ್ದು ನಡೆದುಕೊಂಡು ಬಂದಿದ್ದೇನೆ ಇಂದಿರಾಗಾಂಧಿ, ರಾಜೀವ್ ಗಾಂಧಿ ಸೋನಿಯಾ ಗಾಂಧಿ, ವಿರುದ್ಧ ಬರೆದವರು ಯಾವ ನೈತಿಕತೆ ಆಧಾರದಲ್ಲಿ ಕಾಂಗ್ರೆಸ್ ಪಕ್ಷದ ಎಂಎಲ್ಸಿ ಟಿಕೆಟ್ ಕೇಳಿರುವುದು ಎಂಬುದನ್ನು ಆರೋಪ ಮಾಡಿದವರು ಸ್ಪಷ್ಟಪಡಿಸಲಿ ಎಂದು ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಸಿದ ಮಂಜುನಾಥ್ ಭಂಡಾರಿ ಇನ್ನು ಮುಂದೆ ಈ ರೀತಿಯಾಗಿ ಇಂತಹ ಆರೋಪ ಮಾಡಿದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದರು
ಯಾವುದೇ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಎದುರಾದಾಗ ಗುಡ್ ಪರ್ಸನ್ ಇನ್ ರಾಂಗ್ ಪಾರ್ಟಿ ಎಂಬ ಹೇಳಿಕೆ ನೀಡುತ್ತಾರೆ ಅದನ್ನೇ ಕೆಲವರು ಗಾಳವಾಗಿಸಿಕೊಂಡು ನಮ್ಮಲ್ಲಿ ಕೆಲವರು ಗಾಳಿಯಲ್ಲಿ ಗುಂಡು ಹೊಡೆದಂತೆ ಮಾತನಾಡುತ್ತಾರೆ ಯಾರ ಜೊತೆ ಚಕ್ಕಂದ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದನ್ನು ಆರೋಪ ಮಾಡುವವರು ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಯೂಂದಕ್ಕೆ ಮಂಜುನಾಥ ಭಂಡಾರಿ ಅವರು ಉತ್ತರಿಸಿದರು
ಆರೆಸ್ಸೆಸ್ ಬುದ್ದ ಗಾಂಧಿ ಬಸವಣ್ಣ ತತ್ವ ಒಪ್ಪುತ್ತದೆಯೇ ಭಾರತೀಯ ಸಂವಿಧಾನವನ್ನು ಒಪ್ಪುತ್ತದೆಯೇ ಸರ್ವ ಧರ್ಮ ಸಮಾನತೆಯನ್ನು ಪ್ರತಿಪಾದಿಸುತ್ತದೆಯೇ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಮಂಜುನಾಥ್ ಭಂಡಾರಿಯವರು
2013 ರಲ್ಲಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಕಾಲದಲ್ಲಿ ಸರಕಾರಿ ಶಿಕ್ಷಣ ಸಂಸ್ಥೆ ಪಾರ್ಕ್ ಮಂದಿರ ಮೈದಾನಗಳಲ್ಲಿ ಅನುಮತಿ ರಹಿತವಾಗಿ ಯಾವುದೇ ಚಟುವಟಿಕೆ ಮಾಡಬಾರದು ಎಂಬ ಸುತ್ತೋಲೆಯನ್ನೇ ಎತ್ತಿ ಹಿಡಿದು ಪ್ರಿಯಾಂಕ್ ಖರ್ಗೆಯವರು ಮಾತನಾಡಿದ್ದಾರೆ
ಅವರ ಹೇಳಿಕೆಗೆ ಸಂಪೂರ್ಣ ಬೆಂಬಲವಿದೆ ಎಂದರು
ಸರಕಾರಿ ಒಡೆತನ ಇರುವಲ್ಲಿ ಅನುಮತಿ ಪಡೆಯದೆ ಯಾವುದೇ ಚಟುವಟಿಕೆ ನಡೆಸುವಂತಿಲ್ಲ ಆರ್ ಎಸ್ ಎಸ್ ತನ್ನ 100ರ ಸಂಭ್ರಮದ ಹೆಸರಿನಲ್ಲಿ ಪಥ ಸಂಚಲನ ನಡೆಸಿ ರಸ್ತೆ ಬ್ಲಾಕ್ ಮಾಡುತ್ತಿರುವ ಬಗ್ಗೆ ವಿಷಯ ಮುನ್ನೆಲೆಗೆ ಬಂದಿದೆ ದೇಶದ ರಾಷ್ಟ್ರಧ್ವಜ ಮೇಲೆ ನಂಬಿಕೆ ಇಲ್ಲ ರಾಷ್ಟ್ರಗೀತೆಯನ್ನು ಹಾಡದ ಆರೆಸ್ಸೆಸ್ ವಿರುದ್ಧ ಪ್ರಶ್ನಿಸುವ ಅಧಿಕಾರ ನಮಗಿದೆ ಅದಕ್ಕಾಗಿ ಇಲ್ಲ ಸಲ್ಲದ ಆರೋಪ ಕೊಲೆ ಬೆದರಿಕೆ ಹಾಕುವುದು ಮಹಿಳೆಯನ್ನು ದೇವಿ ಎಂದು ಪೂಜಿಸುವವರು ಕೀಳಾಗಿ ಮಾತನಾಡುವುದನ್ನು ಯಾರಾದರೂ ಒಪ್ಪಲು ಸಾಧ್ಯವೇ ಎಂದವರು ಹೇಳಿದರು
ತಳಮಟ್ಟದ ಸಮುದಾಯದ ಮಕ್ಕಳ ಕೈಗೆ ತ್ರಿಶೂಲ ಕತ್ತಿ ಖಡ್ಗ ಲಾಠಿ ನೀಡುವವರು ಅವರ ಮಕ್ಕಳನ್ನು ಪೆನ್ನು ಕೊಟ್ಟು ಶಿಕ್ಷಣ ಕೊಡಿಸುತ್ತಾರೆ. ನೋಂದಣಿಯೇ ಆಗದ ಸಂಘಟನೆಯೂಂದು ನೂರು ವರ್ಷದ ಪಥ ಸಂಚಲನ ನಡೆಸುತ್ತಿರುವಾಗ ಅದರ ಲೆಕ್ಕ ಕೇಳುವುದರಲ್ಲಿ ತಪ್ಪೇನಿದೆ ಪ್ರಿಯಾಂಕ್ ಖರ್ಗೆಯವರುಈ ಮಾತುಗಳನ್ನು ಕೇಳಿರುವುದು ಬಿಜೆಪಿಯವರಿಗೆ ಗೊತ್ತಿರೋದು ಎರಡೇ ವಿಷಯಗಳು ಒಂದು ಪಾಕಿಸ್ತಾನ ಮತ್ತೊಂದು ಮುಸಲ್ಮಾನ ಎಂಬುದು ಮಾತ್ರ ಅವರ ಅಜೆಂಡ ಅದು ಬಿಟ್ಟರೆ ಅವರಿಗೆ ಬೇರೆ ರಾಜಕಾರಣವೇ ತಿಳಿದಿಲ್ಲ ಎಂದು ಟೀಕಿಸಿದರು
ಪರವಾನಿಗೆ ರಹಿತವಾಗಿ ಶಸ್ತ್ರಾಸ್ತ್ರ ತಯಾರಿಸುವುದು ಬಳಸುವುದು ನಿಷಿದ್ಧ ಆರೆಸ್ಸೆಸ್ ನವರಿಗೆ ತರಬೇತಿ ಲಾಠಿ ಯಾಕೆ ಅದನ್ನು ನಿಷೇಧಿಸಲು ನಾವು ಹೇಳುತ್ತಿರುವುದು ರಸ್ತೆ ತಡೆ ಮಾಡಿ ಕಾರ್ಯಕ್ರಮ ನಡೆಸುವ ಯಾವುದೇ ಸಂಘಟನೆಯವರಾದರೂ ಅನುಮತಿ ಪಡೆಯಬೇಕೆಂಬುದು ನಮ್ಮ ಆಗ್ರಹ ಈ ನಿಟ್ಟಿನಲ್ಲಿ ಕಾನೂನು ಕ್ರಮವಾಗಲಿದೆ ಎಂದರು



