11 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಪುತ್ತೂರು:- ಅಕ್ಟೋಬರ್ 20 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನ-ಮನ 2025 ನಡೆದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ
ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಜನ ಅಸ್ವಸ್ಥರಾಗಿದ್ದಾರೆ
ಈ ಸಂದರ್ಭದಲ್ಲಿ ಕುಡಿಯಲು ನೀರು ಸಿಗದೆ ಜನರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು.
ಮಳೆ ಬಂದು ಕೆಸರು ತುಂಬಿದ್ದ ಮೈದಾನದ ಅವ್ಯವಸ್ಥೆ ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದಿದ್ದ ಜನ ಪರದಾಡುವಂತಾಗಿದೆ
ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



