ಅಸ್ವಸ್ಥರಾದವರು ಗುಣಮುಖ
ಪುತ್ತೂರು:- ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾವರ್ಜನಿಕರಲ್ಲಿ ಕ್ಷೆಮೆಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಿದ ಕಾರಣ ಮತ್ತು ಮಧ್ಯಾಹ್ನ ವೇಳೆ ಗಾಳಿ ಮಳೆ ಬಂದ ಕಾರಣ ಜನರ ನಡುವೆ ಸಿಲುಕಿ ಏಳೆಂಟು ಮಂದಿ ಅಸ್ವಸ್ಥರಾಗಿದ್ದರು
ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ ಸಾಕಷ್ಟು ಪ್ರಮಾಣದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದರೂ ಜನಸಂದಣಿ ಹೆಚ್ಚಾದ ಕಾರಣ ಸ್ವಲ್ಪ ವೆತ್ಯಾಸ ಉಂಟಾಗಿದೆ
ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ ಬೇಸರವಾಗಿದೆ ಇದಕ್ಕೆ ನಾನು ಕ್ಷೆಮೆಯಾಚಿಸುತ್ತೇನೆ ಕಾರ್ಯಕ್ರಮಕ್ಕೆ ಬಂದವರಲ್ಲಿ ಯಾರ ಮನಸ್ಸಿಗೂ ನೋವಾಗಿದ್ದಲ್ಲಿ ಕ್ಷೆಮೆ ಕೇಳುತ್ತೇನೆ ಸಂಜೆ ಬಳಿಕ ರಾತ್ರಿ 9:30 ರ ವರೆಗೂ ಉಡುಗೊರೆ ವಿತರಣೆ ನಡೆದಿದೆ.
ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಆಗಿರುವ ಘಟನೆಗೆ ವಿಷಾದವನ್ನು ವ್ಯಕ್ತಪಡಿಸುವೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ



