ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೇ ಸುಳ್ಳು ಹೇಳಿಕೆ
ಬೆಂಗಳೂರು:- ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದ್ದಾರೆ.
ಪುತ್ತೂರಿಗೆ ಅ.20 ರಂದು ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿರುವ ಜಿಎಸ್ ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸಿದ್ದರಾಮಯ್ಯನವರು ಈ ಹತಾಶೆಯ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡ ಎನ್ನುವಂತಿದೆ.
ಅವರ 15,000 ಕೋಟಿ ರೂ ಕರ್ನಾಟಕಕ್ಕೆ ನಷ್ಟ ಎಂಬ ಹೇಳಿಕೆಗೆ ಯಾವುದೇ ಆಧಾರವಿಲ್ಲ ತಮ್ಮ ಸರ್ಕಾರದ ಆರ್ಥಿಕ ಆಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರ್ಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುವುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ ಕಾಂಗ್ರೆಸ್ಸಿನ ಅಸಂಬದ್ಧ ಗ್ಯಾರಂಟಿ ಯೋಜನೆ ಮೂಡಾ ಹಗರಣ ವಾಲ್ಮೀಕಿ ಹಗರಣ ಹೀಗೆ ಸಿದ್ದರಾಮಯ್ಯನವರ ದುರಾಡಳಿತಕ್ಕೆ ದೊಡ್ಡ ಪಟ್ಟಿಯೇ ಇದೆ ಇದನ್ನೆಲ್ಲ ಮುಚ್ವಿ ಹಾಕುವುದಕ್ಕೆ ಇಡೀ ದೇಶವೇ ಸ್ವಾಗತಿಸಿರುವ ಜಿಎಸ್ ಟಿ ಸುಧಾರಣೆಗಳ ಬಗ್ಗೆ ಈ ರೀತಿ ಬೇಜವಬ್ದಾರಿಯಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಕ್ಯಾ| ಚೌಟ ಅವರು ಹೇಳಿದ್ದಾರೆ



