ಶ್ರೀ ಶೈಲ ಗ್ಯಾಸ್ ಎಜೆನ್ಸಿ ಮಾಲೀಕರಾದ ಚರಿಷ್ಮಾ ರೈ ಇವರಿಂದ ವಿಜೇತರಿಗೆ ಪ್ರಶಸ್ತಿ ಪ್ರಧಾನ
ವಿಟ್ಲ:- ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ವಿಟ್ಲಪಡ್ನೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಬಾಲವಿಕಾಶ ಸಮಿತಿ ಸ್ತ್ರೀಶಕ್ತಿ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳನ್ನು ಸೇರಿಸಿಕೊಂಡು ಗ್ರಾಮೀಣ ಮಟ್ಟದ ಮಹಿಳೆಯರಿಗಾಗಿ ಮಹಿಳಾ ಭಾವ್ಯೆಕ್ಯತಾ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡಂಬು ಇಲ್ಲಿ ನಡೆಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ಬಿ ರಮಾನಾಥ್ ರೈ ಅವರ ಸುಪುತ್ರಿ ಶ್ರೀ ಶೈಲ ಗ್ಯಾಸ್ ಎಜೆನ್ಸಿ ಮಾಲೀಕರಾದ ಕು.ಚರಿಷ್ಮಾ ರೈ ಅವರು ಆಗಮಿಸಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು
ಈ ಸಂದರ್ಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿದ್ದರು
ಕಾರ್ಯಕ್ರಮದ ಸಂಯೋಜಕರು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಸ್ಥಾಪಕಾಧ್ಯಕ್ಷರು ಆಗಿರುವ ಶ್ರೀ ಸಂದೇಶ್ ಶೆಟ್ಟಿ ಬಿಕ್ನಾಜೆ ಕಾರ್ಯಕ್ರಮ ಸಂಘಟಿಸಿದರು.




