ನಾಲ್ವರ ಬಂಧನ –
ಮಂಗಳೂರು:- ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಯ ಕಾನದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಪೋಲಿಸರು ಭೇದಿಸಿದ್ದಾರೆ.
ಅ.23 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದು ಈ ಪೈಕಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾದ ಸುಶಾಂತ್ ಕೆವಿ ಅಲೆಕ್ಸ್ ನಿತಿನ್ ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ಅರುಣ್ ಶೆಟ್ಟಿ( 56) ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.
ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಆಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ
ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ರವಿಶಂಕರ್ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪವಿಭಾಗ) ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ಪೋಲಿಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್ ಜನಾರ್ಧನ ನಾಯ್ಕ್ ಶಶಿಧರ ಶೆಟ್ಟಿ ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ , ರಾಧಾಕೃಷ್ಣ ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್, ಮ್ಯಾಥ್ಯೂ ,ರಾಮು ಕೆ, ಕಾರ್ತಿಕ್ , ವಿನೋದ್, ಹಾಗೂ ಸಿಸಿಬಿ ಘಟಕದ ಅಧಿಕಾರಿ- ಸಿಬ್ಬಂದಿಯವರು ಹಾಗೂ ಎಸ್.ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆಯ ಬಗ್ಗೆ ಹಾಗೂ ತನಿಖೆಯ ಬಗ್ಗೆ ಭಾಗವಹಿಸಿರುತ್ತಾರೆ.



