ಸುಪ್ರೀಂಕೋರ್ಟ್ ಮಾರ್ಗದರ್ಶಿ ಸೂತ್ರಗಳಂತೆ ಎಪ್ಐಆರ್ ಮಾಡಬೇಕು ನವೀನ್ ಸೂರಿಂಜೆ
ಪುತ್ತೂರು:- ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅ.20 ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ ಗರ್ಭಿಣಿ ಮಹಿಳೆಯರನ್ನು ನಿಂದೆನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ
ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು ಅವಳಿಗೆ ಯಾರಾದ್ರು ಕೇಳಿದ್ರಾ ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತ ಇದ್ದೀಯಾ ಅಂತ ಕೇಳಿದ್ರಾ ಕೇಳುವ ಧೈರ್ಯವೂ ಇಲ್ಲ ಎರಡನೆಯದಾಗಿ ಅವರು ಹೇಳ್ತಾರೆ ಅದು ಅಲ್ಲಾಹನಿಗೋಸ್ಕರ ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು
ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ ಏನು ಹೇಳ್ತಿವಿ ಅಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ ಅಲ್ಲಿ ಖಾದರೆ ಗೆಲ್ಲುವುದು ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೆ ವೋಟು ಇದೆ ಹಿಂದೂಗಳು 90000 ಸಾವಿರ ಇರೋದು ಗೆಲ್ಲೋದು ಯಾವಾಗ ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು ನಾವು ಗೆಲ್ತೇವಾ ಗೆಲ್ಲಲು ಸಾಧ್ಯವೇ ಇಲ್ಲ ನಮ್ಮನ್ನು ಸರ್ವನಾಶ
ಹಾಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದು ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಸಂಪ್ಯ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದ್ವೇಷ ಭಾಷಣ ತಡೆ ಸಂಬಂಧ ಸುಪ್ರೀಂಕೋರ್ಟ್ ಮಾರ್ಗದರ್ಶಿ ಸೂತ್ರಗಳಂತೆ ಪೋಲಿಸರು ಈ ಪ್ರಕರಣವನ್ನು ಎಪ್ ಐಆರ್ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಿರಿಯ ಪತ್ರಕರ್ತ ನವೀನ್ ಸೂರಿಂಜೆ ಅವರು ಒತ್ತಾಯಿಸಿದ್ದಾರೆ.



